Tuesday, September 13, 2022

ಪರಿಚಯ : ಡಾ. ಪ್ರಕಾಶ ಗ. ಖಾಡೆ

 ಪರಿಚಯ :

ಡಾ. ಪ್ರಕಾಶ ಗ. ಖಾಡೆ






 




ಬಾಗಲಕೋಟೆಯ ಡಾ. ಪ್ರಕಾಶ ಗ. ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ 10 ನೇ ಜೂನ 1965 ರಂದು ಜನಿಸಿದರು. ತಂದೆ ಗಣಪತಿ, ತಾಯಿ ಗಂಗೂಬಾಯಿ, ಪತ್ನಿ ಅನ್ನಪೂರ್ಣ ಅವರು. ಡಾ.ಪ್ರಕಾಶ ಗ.ಖಾಡೆ ಅವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರು ತೊದಲಬಾಗಿಯಲ್ಲಿ ಪೂರೈಸಿಕೊಂಡು , ಪ್ರೌಢ ಶಿಕ್ಷಣವನ್ನು ಬಾದಾಮಿ ತಾಲೂಕಿನ ಕೆರೂರು, ಬಿ.ಎ. ಕನ್ನಡ ಪದವಿ ಶಿಕ್ಷಣವನ್ನು ಇಳಕಲ್ಲು, ಎಂ.ಎ. ಕನ್ನಡ ಪದವಿಯನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಪೂರೈಸಿಕೊಂಡರು. ಮುಂದೆ " ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ " ವಿಷಯದ ಮೇಲೆ ಪ್ರೊ. ಎ.ವಿ.ನಾವಡ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಮಹಾ ಪ್ರಬಂಧವನ್ನು ಸಿದ್ಧಪಡಿಸಿ 2005 ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ ಪದವಿಗೆ ಭಾಜನರಾದರು.  

    ಕಾವ್ಯ, ಕಥೆ, ನಾಟಕ, ಜೀವನಚರಿತ್ರೆ, ಸಂಶೋಧನೆ, ಸಂಪಾದನೆ, ಜಾನಪದ ಹಾಗೂ ವಿಮರ್ಶೆಗಳು ಸೇರಿದಂತೆ 32 ಕೃತಿಗಳನ್ನು ರಚಿಸಿದ್ದಾರೆ. ಪ್ರೀತಿ ಬಟ್ಟಲು, ಕೃಷ್ಣಾ ತೀರದ ಜನಪದ ಒಗಟುಗಳು, ನೆಲಮೂಲ ಸಂಸ್ಕøತಿ, ಜಾನಪದ ಲೋಕ, ಜನಪದ ಕೋಗಿಲೆ ಚಲವಾದಿ ಗೌರಮ್ಮ, ಮೌನ ಓದಿನ ಬೆಡಗು, ಜಾನಪದ ಹೆಬ್ಬಾಗಿಲು, ಸಾಹಿತ್ಯ ಸಂಗತಿ, ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ, ಕಣ್ಣುಗಳಿಗೆ ಮೌನ ಅರ್ಥವಾಗುತ್ತದೆ. ಶಾಂತಿ ಬೀಜಗಳ ಜತನ, ಕೊರೊನಾ ಕಾಲದ ಕವಿತೆಗಳು, ಬೇಂದ್ರೆ ಕಾವ್ಯದ ದೇಸಿಯತೆ, ಬಾಗಲಕೋಟೆ ಹೋಳಿ ಹಾಗೂ ಚೆಲುವಿ ಚಂದ್ರಿ ಕಥಾ ಸಂಕಲನ ಮುಂತಾದವುಗಳು ಇವರ ಪ್ರಕಟಿತ ಕೃತಿಗಳು.

   ಕನ್ನಡ ಸಾಹಿತ್ಯ ಪರಿಷತ್ತಿನ ಮುದ್ದಣ ಕಾವ್ಯ ಪ್ರಶಸ್ತಿ, ಬೇಂದ್ರೆ ಸಾಹಿತ್ಯ ಪ್ರಶಸ್ತಿ, ಹುಬ್ಬಳ್ಳಿಯ ಬೊಮ್ಮಾಯಿ ಪ್ರತಿಷ್ಠಾನ ಪ್ರಶಸ್ತಿ, ಆಜೂರ ಪ್ರತಿಷ್ಠಾನ ಪ್ರಶಸ್ತಿ, ಹರಿಹರಶ್ರೀ ಸಾಹಿತ್ಯ ಪ್ರಶಸ್ತಿ, ಸಂಕ್ರಮಣ ಸಾಹಿತ್ಯ ಪ್ರಶಸ್ತಿ ಹಾಗೂ ಮುಂಂಬಯಿಯ ಮೊಗವೀರ ಕಥಾ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ. ಆಕಾಶವಾಣಿ, ದೂರದರ್ಶನಗಳಲ್ಲಿ ಸಾಹಿತ್ಯಿಕ ಕಾರ್ಯಕ್ರಮಗಳು ಪ್ರಸಾರವಾಗಿವೆ. ದಸರಾ, ಕಿತ್ತೂರು,ನವರಸಪುರ, ಚಾಲುಕ್ಯ, ಹಂಪಿ ಉತ್ಸವ ಹಾಗೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗಳಲ್ಲಿ ಕವಿತೆ ವಾಚಿಸಿದ್ದಾರೆ. 

      ಕೊವಿಡ್-19 ಕೊರೊನಾ ಕಾಲ ಘಟ್ಟದ ಲಾಕ್‍ಡೌನ್ ವೇಳೆಯಲ್ಲಿ ಪ್ರತಿ ದಿವಸ ಮನೆಯಲ್ಲಿದ್ದುಕೊಂಡೆ "ದೇಸಿ : ಕನ್ನಡದ ಅನನ್ಯತೆ" ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನೂರಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ. "ಬೆಳಕಾಯಿತು ಬಾಗಲಕೋಟೆ' ಹೆಸರಿನಲ್ಲಿ ಫೇಸ್ ಬುಕ್ ಲೈವ್‍ದಲ್ಲಿ ನಾಡಿನ ವಿದ್ವಾಂಸರಿಂದ ಅವಿಭಜಿತ ವಿಜಯಪುರ, ಬಾಗಲಕೋಟೆ ಜಿಲ್ಲೆಯ ಸಾಧಕರನ್ನು ಕುರಿತು ಸರಣಿ ಉಪನ್ಯಾಸಗಳನ್ನು ಏರ್ಪಡಿಸಿಕೊಂಡು ಬಂದಿದ್ದಾರೆ, 140 ಕ್ಕೂ ಹೆಚ್ಚು ಉಪನ್ಯಾಸಗಳು ಪ್ರಸಾರವಾಗಿವೆ. ಜೊತೆಗೆ ಇವರ ಕೂಡಿ ಕಟ್ಟಿದ ಕನ್ನಡ, ಒಲುಮೆ ಹಾಡಿಗೆ ಗೀತೆಗಳು  ಜಗದೆಲ್ಲೆಡೆ ಜನಪ್ರಿಯವಾಗಿವೆ.


#

ವಿಳಾಸ.

ಡಾ.ಪ್ರಕಾಶ ಗ.ಖಾಡೆ, ಮನೆ ನಂ. ಎಸ್.135, ಬಡಾವಣೆ ಸಂಖ್ಯೆ 63, ನವನಗರ, ಬಾಗಲಕೋಟೆ-587103

ಮೊ.9845500890


No comments:

Post a Comment

Shivaratri -Dr.Prakash Khade

 ಶಿವರಾತ್ರಿ ವಿಶೇಷ ಲೇಖನ   : ಜನಪದರ ಹಾಡುಗಳಲ್ಲಿ ಶಿವರಾತ್ರಿ :  -ಡಾ.ಪ್ರಕಾಶ ಗ. ಖಾಡೆ,    ಬಾಗಲಕೋಟ ಮೊ. 9845500890    ಭಾರತೀಯ ಸಂಸ್ಕøತಿಯ ಬೇರುಗಳು ನಮ್ಮ ಜನಪದರ...